ADVERTISEMENT

ಮಡಿವಾಳರ ಸಂಘದ ನಿರ್ದೇಶಕರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 7:11 IST
Last Updated 11 ಜನವರಿ 2023, 7:11 IST
ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಮುನಿಶಾಮಯ್ಯ ಅವರನ್ನು ಅಭಿನಂದಿಸಲಾಯಿತು
ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಮುನಿಶಾಮಯ್ಯ ಅವರನ್ನು ಅಭಿನಂದಿಸಲಾಯಿತು   

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಮಡಿವಾಳರ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ತಾಲ್ಲೂಕಿನ ಮುನಿಶಾಮಯ್ಯ ಅವರನ್ನು ತಾಲ್ಲೂಕು ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

ನಿರ್ದೇಶಕ ಮುನಿಶಾಮಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಮಡಿವಾಳ ಸಂಘದ ನಿರ್ದೇಶಕನಾಗಿ ಆಯ್ಕೆ ಮಾಡಿರುವುದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ತಾಲ್ಲೂಕಿನಲ್ಲಿ ಸಮಾಜದ ಜನತೆಗೆ ನಿಷ್ಪಕ್ಷಪಾತವಾಗಿ ಸೇವೆ ಮಾಡಿದ್ದನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಮಡಿವಾಳ ಸಮುದಾಯಕ್ಕೆ ದೊರೆಯುವ ಸವಲತ್ತುಗಳನ್ನು ಜನತೆಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ತಾಲ್ಲೂಕಿನ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಡಿ.ಎಲ್. ಗಂಗಾಧರ್, ಖಜಾಂಚಿ ಶ್ರೀನಿವಾಸ್, ನಿರ್ದೇಶಕ ಮುತ್ತುರಾಜು, ಚಿಕ್ಕಪಾಪಣ್ಣ, ಮುಖಂಡರಾದ ವೈರ್ ಶಿವಕುಮಾರ್, ವೀರಂಜಿ, ಮುನಿಯಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.