ಆನೇಕಲ್: ತಾಲ್ಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಮತ್ತು ಉಪಾಧ್ಯಕ್ಷರಾಗಿ ಸರಸ್ವತಮ್ಮ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರಾಗಿದ್ದ ರತ್ನಮ್ಮ ರಾಜಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ಮತ್ತು ಸರಸ್ವತಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಗೌಡ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್ ರೆಡ್ಡಿ, ಟಿಎಪಿಸಿಎಂಎಸ್ ನಿರ್ದೇಶಕ ಮಂಜಣ್ಣ, ಮುಖಂಡರಾದ ಬಿ.ಪಿ.ರಮೇಶ್, ಜಯರಾಜ್, ಬೆಸ್ತಮಾನಹಳ್ಳಿ ಯಲ್ಲಪ್ಪ, ಶಾಂತಮ್ಮ ಬೈರೇಗೌಡ, ಸತೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.