ADVERTISEMENT

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕ ಉಪಾಧ್ಯಕ್ಷ ಘೋಷಣೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 4:51 IST
Last Updated 15 ನವೆಂಬರ್ 2021, 4:51 IST
ದೇವನಹಳ್ಳಿ ಪಟ್ಟಣದ ವಿಜಯಪುರ ವೃತ್ತದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿ ಜಯೇಂದ್ರ ಅವರನ್ನು ವೀರಶೈವ ಸಮಾಜದ ಮುಖಂಡರು ಅಭಿನಂದಿಸಿದರು
ದೇವನಹಳ್ಳಿ ಪಟ್ಟಣದ ವಿಜಯಪುರ ವೃತ್ತದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿ ಜಯೇಂದ್ರ ಅವರನ್ನು ವೀರಶೈವ ಸಮಾಜದ ಮುಖಂಡರು ಅಭಿನಂದಿಸಿದರು   

ದೇವನಹಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾ ವಣೆಎದುರಿಸುತ್ತೇವೆ ಎಂದುಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪಟ್ಟಣದ ವಿಜಯಪುರ ವೃತ್ತದಲ್ಲಿ ಭಾನುವಾರ ಡಾ.ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಜನತೆಗೆ ಪೂರ್ಣ ಪ್ರಮಾಣದ ವಿಶ್ವಾಸವಿದೆ. ಅವರು ಸಾಕಷ್ಟು ಪ್ರಮಾಣದಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಪುನಃ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್ ಈಗಾಗಲೇ ದೇಶದಲ್ಲಿ ನಿರ್ನಾಮವಾಗುವ ಹಂತದಲ್ಲಿದೆ. ಇದರಿಂದ ಹತಾಶೆಗೊಂಡಿದ್ದು, ಬಿಟ್ ಕಾಯಿನ್ ವಿಚಾರವನ್ನು ಮುಂದಿಟ್ಟುಕೊಂಡು ಬಿಟ್ಟಿ ಪ್ರಚಾರ ಪಡೆಯುತ್ತಿದೆ. ಅವರ ಆರೋಪಗಳಲ್ಲಿ ಹುರುಳಿಲ್ಲ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದ್ದು, ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಿದೆ’ ಎಂದು
ಟೀಕಿಸಿದರು.

ಆದರೆ, ರಾಜ್ಯದ ಕಾಂಗ್ರೆಸ್‌ ನಾಯಕರು ತಮ್ಮ ಅಸ್ತಿತ್ವ ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗಾಗಿ, ಮುಖ್ಯಮಂತ್ರಿ ಬಗ್ಗೆ ಇಲ್ಲಸಲ್ಲದ ಆರೋಪಗಳ ಮೂಲಕ ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ಹೇಳಿದರು.

ವೀರಶೈವ ಸಮಾಜದ ಅಧ್ಯಕ್ಷ ಎಂ.ಎಸ್. ರಮೇಶ್, ಖಜಾಂಚಿ ಹಾಗೂ ಪುರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಎಸ್. ನಾಗೇಶ್, ಕಾರ್ಯದರ್ಶಿ ಎಸ್.ವಿ ಜಯ್‌ಕುಮಾರ್, ಉಪಾಧ್ಯಕ್ಷ ನಾಗಭೂಷಣ್, ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ವಿರೂಪಾಕ್ಷ ಶಾಸ್ತ್ರಿ ಪ್ರಧಾನ ಕಾರ್ಯದರ್ಶಿಪ್ರಸನ್ನಹಳ್ಳಿ ವಿರೂಪಾಕ್ಷ, ನಿರ್ದೇಶಕ ಶಾಂತಮೂರ್ತಿ, ಭೂ ನ್ಯಾಯಮಂಡಳಿ ಸದಸ್ಯ ಗಿರೀಶ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುನಿಲ್ (ಸುಂದರೇಶ್), ಬಿಜೆಪಿ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಚೇತನ್, ವಿಜಯಪುರ ಟೌನ್ ಅಧ್ಯಕ್ಷ ಆರ್.ಸಿ. ಮಂಜುನಾಥ್, ತಾಲ್ಲೂಕು ಉಪಾಧ್ಯಕ್ಷೆ ಪುನೀತಾ, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೂದಿಗೆರೆ ನಾಗವೇಣಿ, ಕೀರ್ತಿ, ನಟರಾಜ್, ವಿವೇಕ್, ಕಾಂತರಾಜು, ದಯಾನಂದ್, ಎಂ ಕುಮಾರ್, ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.