
ಆನೇಕಲ್: ಬನ್ನೇರುಘಟ್ಟ ಸಮೀಪದ ಕಾಡಂಚಿನ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ಕಾಡಾನೆಗಳು ಓಡಾಟ ನಡೆಸಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಬನ್ನೇರುಘಟ್ಟ ಸಮೀಪದ ಬ್ಯಾಲದಮರದೊಡ್ಡಿ ಬಳಿ ಎರಡು ಕಾಡಾನೆಗಳು ನಾಲ್ಕೈದು ದಿನಗಳಿಂದ ನಿರಂತರವಾಗಿ ಓಡಾಟ ನಡೆಸಿವೆ. ಗ್ರಾಮದ ಕೃಷ್ಣ ಎಂಬುವರ ಮನೆ ಬಳಿ ಕಾಡಾನೆಗಳು ಓಡಾಟ ನಡೆಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾಡಾನೆಗಳ ಓಡಾಟದಿಂದಾಗಿ ರೈತರಲ್ಲಿ ಆತಂಕ ಮೂಡಿದ್ದು, ಬೆಳೆಹಾನಿಯ ಜೊತೆಗೆ ಜೀವವನ್ನು ಕಾಪಾಡಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಕಾಡಾನೆಗಳನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಕಾಡಾನೆಗಳು ನಾಡಿನತ್ತ ಬರುವುದನ್ನು ಕಡಿಮೆ ಮಾಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.