ಆನೇಕಲ್: ಸರ್ಜಾಪುರ ಸಮೀಪದ ತಿಗಳ ಚೌಡದೇನಹಳ್ಳಿಯಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ.
ಮಂಜುಳಾ (40) ಕೊಲೆಯಾದ ಮಹಿಳೆ. ಮಂಜುನಾಥ್ (45) ಪತ್ನಿ ಕೊಲೆಗೈದ ಆರೋಪಿ. ಈತನನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ಮಾನಸಿಕ ಅಸ್ವಸ್ಥೆಯಾಗಿದ್ದು. ಇದರಿಂದ ಪತಿ ಮಂಜುನಾಥ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಶನಿವಾರ ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿಯ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದಿದ್ದರಿಂದ ಸಿಟ್ಟುಗೊಂಡ ಪತಿ ತನ್ನ ಪತ್ನಿಯನ್ನ ಭುಜದ ಮೇಲೆ ಎತ್ತುಕೊಂಡು ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಿಂದ ತಳ್ಳಿದ್ದಾನೆ. ಕೆಳಗೆ ಬೀಳುತ್ತಿದ್ದಂತೆಯೇ ಮಂಜುಳಾ ತಲೆಗೆ ಗಂಭೀರ ಗಾಯಗಳಾಗಿತ್ತು.
ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.
ಸ್ಥಳಕ್ಕೆ ಇನ್‌ಸ್ಪೆಕ್ಟರ್ ಪಿ.ಜಿ ನವೀನ್ ಕುಮಾರ್ ಭೇಟಿ ನೀಡಿ ಆರೋಪಿ ಮಂಜುನಾಥ್ ನನ್ನು ಬಂಧಿಸಿದ್ದು, ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.