ADVERTISEMENT

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 4:44 IST
Last Updated 15 ಸೆಪ್ಟೆಂಬರ್ 2022, 4:44 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಡತಿಪ್ಪೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಮಾತೃ ವಂದನಾ ಕಾರ್ಯಕ್ರಮದಲ್ಲಿ ತಾಯಂದಿರಿಗೆ ಮಕ್ಕಳು ಪಾದಪೂಜೆ ನೆರವೇರಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಡತಿಪ್ಪೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಮಾತೃ ವಂದನಾ ಕಾರ್ಯಕ್ರಮದಲ್ಲಿ ತಾಯಂದಿರಿಗೆ ಮಕ್ಕಳು ಪಾದಪೂಜೆ ನೆರವೇರಿಸಿದರು   

ದೇವನಹಳ್ಳಿ: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಛಿಸುವವರಿಗೆ ತರಬೇತಿ ನೀಡಲಾಗುತ್ತದೆ.

10 ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ಸೆ. 19ರಂದು ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯ ಕುರಿತು ತರಬೇತಿ ನೀಡಲಾಗುತ್ತದೆ.

ADVERTISEMENT

ಹೆಚ್ಚಿನ ಮಾಹಿತಿಗೆ ಮೊಬೈಲ್ 77608 16038 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.