ADVERTISEMENT

ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪರಿಸರ ಜಾಥಾ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 15:47 IST
Last Updated 23 ಏಪ್ರಿಲ್ 2025, 15:47 IST
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅತ್ತಿಬೆಲೆ ಕೈಗಾರಿಕಾ ಸಂಘದಿಂದ ಪರಿಸರ ಜಾಥಾ ಆಯೋಜಿಸಲಾಗಿತ್ತು
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅತ್ತಿಬೆಲೆ ಕೈಗಾರಿಕಾ ಸಂಘದಿಂದ ಪರಿಸರ ಜಾಥಾ ಆಯೋಜಿಸಲಾಗಿತ್ತು   

ಆನೇಕಲ್: ತಾಲ್ಲೂಕಿನ ಅತ್ತಿಬೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅತ್ತಿಬೆಲೆ ಕೈಗಾರಿಕಾ ಸಂಘದಿಂದ ಪರಿಸರ ಜಾಥಾ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು, ವಿವಿಧ ಕಂಪನಿಗಳ ಉದ್ಯೋಗಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಾಥಾ ಪ್ರಯುಕ್ತ ಕೈಗಾರಿಕಾ ಸಂಘದಿಂದ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ಪ್ಲಾಸ್ಟಿಕ್‌ ಬಳಕೆ ಅಂತ್ಯಗೊಳಿಸಿ ಘೋಷಣೆಯಡಿ ವಿವಿಧ ಕಾರ್ಯಕ್ರಮ ನಡೆಯಿತು. ಘೋಷಣಾ ಫಲಕ ಹಿಡಿದು ಅತ್ತಿಬೆಲೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಧುಸೂದನ್‌ ಮಾತನಾಡಿ, ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ಜಾಥಾ ಆಯೋಜಿಸಲಾಗಿದೆ. ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಶೇ50ರಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಕ್ರಮ ವಹಿಸಲಾಗಿದೆ. ಪರಿಸರ ಸಂರಕ್ಷಣೆಗೆ ಕೈಗಾರಿಕಾ ಪ್ರದೇಶಗಳು ಕೈಜೋಡಿಸಬೇಕು ಎಂದರು.

ADVERTISEMENT

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಪುಟ್ಟರಾಜು, ಅತ್ತಿಬೆಲೆ ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ರುದ್ರಪ್ಪ, ಜಂಟಿ ಕಾರ್ಯದರ್ಶಿ ಪ್ರದೀಪ್‌ ಸಾವಂತ್‌, ಖಜಾಂಚಿ ಜಯೇಂದ್ರ, ಪದಾಧಿಕಾರಿಗಳಾದ ರಾಮಪ್ರಸಾದ್, ದೀಪು, ಪ್ರಕಾಶ್, ಕೃಷ್ಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.