ADVERTISEMENT

ಸಚಿವ ಈಶ್ವರಪ್ಪ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 1 ಮೇ 2020, 9:11 IST
Last Updated 1 ಮೇ 2020, 9:11 IST
ವಿ.ಮಂಜುನಾಥ್ ಕೆಪಿಸಿಸಿ ಕಾರ್ಯದರ್ಶಿ
ವಿ.ಮಂಜುನಾಥ್ ಕೆಪಿಸಿಸಿ ಕಾರ್ಯದರ್ಶಿ   

ವಿಜಯಪುರ: ನರೇಗಾ ಯೋಜನೆ ಯಲ್ಲಿ ಅವ್ಯವಹಾರ ನಡೆದಿದ್ದು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ತೀರಾ ಲಘುವಾದ ಭಾಷೆ ಬಳಸಿದ್ದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಅವರು ಖಂಡಿಸಿದ್ದಾರೆ.

‘ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ನರೇಗಾ ಯೋಜನೆಯಡಿ ಕೈಗೊಂಡಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲು ಭೇಟಿ ನೀಡಿದ್ದ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಡಿ.ಕೆ.ಶಿವಕುಮಾರ್ ಅವರ ಆರೋಗ್ಯಕರ ಸಲಹೆಗೆ ಸಲ್ಲದ ಪದಗಳನ್ನು ಬಳಸಿ ಪ್ರತ್ಯುತ್ತರ ನೀಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಕೀಳುಭಾಷೆ ಬಳಸಿ ಸಚಿವರು ತಮ್ಮ ಘನತೆಯನ್ನು ಮರೆತಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT