ADVERTISEMENT

‘ಸಿದ್ಧಲಿಂಗಯ್ಯ ಅಧ್ಯಯನ ಪೀಠ ಸ್ಥಾಪಿಸಿ’

ರಾಜ್ಯ ಸರ್ಕಾರಕ್ಕೆ ಛಲವಾದಿ ಮಹಾಸಭಾ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 5:35 IST
Last Updated 17 ಜೂನ್ 2021, 5:35 IST
ದೊಡ್ಡಬಳ್ಳಾಪುರ ತಾಲ್ಲೂಕು ಛಲವಾದಿ ಮಹಾಸಭಾದಿಂದ ಕವಿ ಡಾ.ಸಿದ್ಧಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ದೊಡ್ಡಬಳ್ಳಾಪುರ ತಾಲ್ಲೂಕು ಛಲವಾದಿ ಮಹಾಸಭಾದಿಂದ ಕವಿ ಡಾ.ಸಿದ್ಧಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ದೊಡ್ಡಬಳ್ಳಾಪುರ: ‘ರಾಜ್ಯದವಿಶ್ವವಿದ್ಯಾಲಯಗಳಲ್ಲಿ ಡಾ.ಸಿದ್ಧಲಿಂಗಯ್ಯ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು’ ಎಂದು ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಸಿ. ಗುರುರಾಜಪ್ಪ ಒತ್ತಾಯಿಸಿದರು.

ನಗರದ ಕನ್ನಡ ಜಾಗೃತ ಭವನದಲ್ಲಿ ತಾಲ್ಲೂಕು ಛಲವಾದಿ ಮಹಾಸಭಾ ಆಯೋಜನೆ ಮಾಡಿದ್ದ ಕವಿ ಡಾ.ಸಿದ್ಧಲಿಂಗಯ್ಯ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಅವರು
ಮಾತನಾಡಿದರು.

ಸಿದ್ಧಲಿಂಗಯ್ಯ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚಿನ ಕಾಳಜಿ ತೋರಿಸಿದೆ. ಅವರು ದೇಶ ಕಂಡ ಮೇರು ವ್ಯಕ್ತಿ. ಪರಿಶಿಷ್ಟ, ಹಿಂದುಳಿದ ಹಾಗೂ ದುಡಿಯುವ ಸಮುದಾಯದ ಏಳಿಗೆಗಾಗಿ ಅವರು ಸಲ್ಲಿಸಿದ ಸೇವೆ ಅಪಾರವಾದುದು ಎಂದು ಹೇಳಿದರು.

ADVERTISEMENT

ಪ್ರಗತಿಪರ ವಿಚಾರ ಒಳಗೊಂಡ ಬರಹಗಳ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. ಕನ್ನಡ ಕಾವ್ಯದ ದಿಕ್ಕನ್ನೇ ಬದಲಿಸಿದ ಸಿದ್ಧಲಿಂಗಯ್ಯ ಅವರು ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲಿ ಪ್ರಮುಖರು ಎಂದು ಹೇಳಿದರು.

ಸಿದ್ಧಲಿಂಗಯ್ಯ ಅವರು ತಮ್ಮ ಬದುಕಿನುದ್ದಕ್ಕೂ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದುಡಿದ ಅವರು ಕನ್ನಡ ನಾಡಿನ ನಿಜವಾದ ನಾಡೋಜ ಎಂದರು.

ಮುಂದಿನ ತಲೆಮಾರಿನ ಪ್ರೇರಣಾ ಶಕ್ತಿಯಾಗಿರುವ ಅವರ ವಿಚಾರಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು. ಅವರಿಗೆ ಮರಣೋತ್ತರವಾಗಿ ರಾಷ್ಟ್ರಕವಿ ಬಿರುದು ನೀಡಿ ಗೌರವಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಛಲವಾದಿ ಮಹಾಸಭಾದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಜು ಸಣ್ಣಕ್ಕಿ, ಮುಖಂಡರಾದ ಜಿ. ಲಕ್ಷ್ಮೀಪತಿ, ಸೊಣಪನಹಳ್ಳಿ ರಮೇಶ್, ಹನುಮಂತರಾಯಪ್ಪ, ಆಂಜನಮೂರ್ತಿ, ಛಲವಾದಿ ಸುರೇಶ್, ಪುನೀತ್, ಮೂರ್ತಿ, ಉದಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.