ಜೆ.ನರಸಿಂಹಸ್ವಾಮಿ
ದೊಡ್ಡಬಳ್ಳಾಪುರ: ತಾಲ್ಲೂಕಿನ ಹಿರಿಯ ರಾಜಕಾರಣಿ ದಿವಂಗತ ಆರ್.ಎಲ್.ಜಾಲಪ್ಪ ಅವರ ಹಿರಿಯ ಪುತ್ರ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ(78) ಭಾನುವಾರ ಬೆಳಿಗ್ಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಾಂಗ್ರೆಸ್ ನಿಂದ ಎರಡು ಬಾರಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.
2008ರಲ್ಲಿ ಅಪರೇಷನ್ ಕಮಲದಿಂದ ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ಕೊಳಚೆ ನಿರ್ಮೂಲನೆ ಮಂಡಳಿ ಅಧ್ಯಕ್ಷರಾಗಿದ್ದರು.
2013 ಹಾಗೂ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
ಮೃತರಿಗೆ ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ 4 ಗಂಟೆಗೆ ಮೃತರ ಸ್ವಗ್ರಾಮ ತೂಬಗೆರೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.