ADVERTISEMENT

ಕಣ್ಣಿನ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 5:42 IST
Last Updated 25 ಫೆಬ್ರುವರಿ 2021, 5:42 IST
ಸೂಲಿಬೆಲೆ ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಆ್ಯಂಡ್ ಕಲ್ಚರಲ್ ಟ್ರಸ್ಟ್, ದೃಷ್ಟಿ ಆಪ್ಟಿಕಲ್ಸ್ ಸಹಯೋಗದಲ್ಲಿ ಜನತಾ ಕಾಲೊನಿಯ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿದ ಗಣ್ಯರು
ಸೂಲಿಬೆಲೆ ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಆ್ಯಂಡ್ ಕಲ್ಚರಲ್ ಟ್ರಸ್ಟ್, ದೃಷ್ಟಿ ಆಪ್ಟಿಕಲ್ಸ್ ಸಹಯೋಗದಲ್ಲಿ ಜನತಾ ಕಾಲೊನಿಯ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿದ ಗಣ್ಯರು   

ಸೂಲಿಬೆಲೆ: ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಆ್ಯಂಡ್ ಕಲ್ಚರಲ್ ಟ್ರಸ್ಟ್‌, ದೃಷ್ಟಿ ಆಪ್ಟಿಕಲ್ಸ್, ಜನತಾ ಕಾಲೊನಿಯ ಸರ್ಕಾರಿ ಕನ್ನಡ ಮತ್ತು ಉರ್ದು ಶಾಲೆಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ
ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಸ್ಥಳೀಯ ಮುಖಂಡ ಬಿ.ಎನ್. ಗೋಪಾಲಗೌಡ ಮಾತನಾಡಿ, ‘ಶಾಲೆಗೆ ಬೇಕಾಗಿರುವ ಮೂಲ ಸೌಲಭ್ಯ ಕಲ್ಪಿಸಿಕೊಡುವ ಭರವಸೆ ನೀಡಿದರು.

ಸರ್ಕಾರಿ ಶಾಲೆ ಮತ್ತು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಬೇಕು ಎಂದರು.

ADVERTISEMENT

ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ. ಚೌಡೇಗೌಡ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರಾಜ್, ನೇತ್ರ ತಪಾಸಣಾ ಅಧಿಕಾರಿ ರಂಗಸ್ವಾಮಿ, ಎಸ್ಡಿಎಂಸಿ ಉಪಾಧ್ಯಕ್ಷ ಸಿರಾಜ್ ಖಾನ್, ಟ್ರಸ್ಟ್ ಪದಾಧಿಕಾರಿಗಳಾದ ಸೈಯದ್ ಮಹಬೂಬ್, ದೇವಿದಾಸ್ ಸುಬ್ರಾಯ್ ಸೇಠ್, ವಸಂತಕುಮಾರ್, ರವಿಕಿರಣ್, ಮುಖ್ಯಶಿಕ್ಷಕ ಗುರುರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ವಿದ್ಯಾಶ್ರೀ, ಸಾಬೀರ್ ಬೇಗ್, ಜನಾರ್ದನ್ ರೆಡ್ಡಿ, ಕೃಷ್ಣಪ್ಪ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಉಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.