ಆನೇಕಲ್: ಆಧಾರ್, ಪಾನ್‌ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ನಕಲು ಮಾಡುತ್ತಿದ್ದ ಸೈಬರ್ ಕೇಂದ್ರದ ಮೇಲೆ ಮಂಗಳವಾರ ದಾಳಿ ನಡೆಸಿದ ಹೆಬ್ಬಗೋಡಿ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಶವಂತ್ (20) ಮತ್ತು ರಘುವೀರ್ (26) ಬಂಧಿತ ಆರೋಪಿಗಳು. ಹೆಬ್ಬಗೋಡಿಯಲ್ಲಿ ಗುರುದತ್ತ ಸೈಬರ್ ಕೇಂದ್ರ ನಡೆಸುತ್ತಿದ್ದ ಬಂಧಿತರು, ಆಧಾರ್ ಕಾರ್ಡ್, ಪಾನ್‌ಕಾರ್ಡ್, ಅಂಕಪಟ್ಟಿ ಸೇರಿದಂತೆ ಹಲವು ದಾಖಲೆಗಳನ್ನು ನಕಲಿ ಮಾಡುತ್ತಿದ್ದರು. ಈ ನಕಲಿ ದಾಖಲೆಗಳನ್ನು ₹5,000–₹10,000ದವರೆಗೆ ಮಾರಾಟ ಮಾಡುತ್ತಿದ್ದರು.
ಈ ಕುರಿತು ಖಚಿತ ಮಾಹಿತಿ ಕಲೆ ಹಾಕಿದ್ದ ಹೆಬ್ಬಗೋಡಿ ಠಾಣೆ ಪೊಲೀಸರು, ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಸೈಬರ್ ಕೇಂದ್ರದಲ್ಲಿ ಆರು ಆಧಾರ್ ಕಾರ್ಡ್‌ಗಳು, ಏಳು ಅಂಕಪಟ್ಟಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹೆಚ್ಚಿನ ವಿಚಾರಣೆಗಾಗಿ ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಬ್ಬಗೋಡಿ ಪೊಲೀಸ್ ಇನ್‌ಸ್ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.