
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ದಾಬಸ್ ಪೇಟೆ: ಕುಟುಂಬ ಕಲಹಕ್ಕೆ ಮನನೊಂದು ಗೃಹಿಣಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರು ತಾಲ್ಲೂಕಿನ ಭೀಮಸಂದ್ರ ಗ್ರಾಮದ ನಿವಾಸಿ ಪ್ರಮೀಳಾ (49) ದಾಬಸ್‌ಪೇಟೆ ಸಮೀಪದ ದೇವರ ಹೊಸಹಳ್ಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.