ADVERTISEMENT

ದೊಡ್ಡಬಳ್ಳಾಪುರ: ರಾಗಿ ಖರೀದಿ ನೋಂದಣಿಗೆ ಒತ್ತಾಯಿಸಿ ರೈತರಿಂದ ರಸ್ತೆ ತಡೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 7:22 IST
Last Updated 15 ಡಿಸೆಂಬರ್ 2022, 7:22 IST
ರಸ್ತೆ ತಡೆದು ರೈತರ ಪ್ರತಿಭಟನೆ
ರಸ್ತೆ ತಡೆದು ರೈತರ ಪ್ರತಿಭಟನೆ   

ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿ ಇಡೀ ರಾಜ್ಯದಲ್ಲಿ ಗುರುವಾರದಿಂದ ಪ್ರಾರಂಭವಾಗಿದೆ. ಆದರೆ ದೊಡ್ಡಬಳ್ಳಾಪುರದಲ್ಲಿ ಮಾತ್ರ ಆರಂಭಿಸದೆ ಅಧಿಕಾರಗಳು ಕುಂಟು ನೆಪಹೇಳುತ್ತಿರುವುದಕ್ಕೆ ಆಕ್ರೋಶಗೊಂಡ ರೈತರು ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿನ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

2022-23ನೇ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು ದಕ್ಷಿಣ) ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ. ಡಿ. 15 ರಿಂದ ರಾಗಿ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದರು.

ಈ ಮಾಹಿತಿ ಮೇರೆಗೆ ರೈತರು ಬೆಳಗಿನ ಜಾವದಿಂದಲೇ ಎಪಿಎಂಸಿ ಆವರಣದಲ್ಲಿನ ರಾಗಿ ಖರೀದಿ ನೋಂದಣಿ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತಿದ್ದರು. ಹತ್ತ ಗಂಟೆಯ ನಂತರ ಸ್ಥಳಕ್ಕೆ ಬಂದ ಕೆಲ ಅಧಿಕಾರಿಗಳು ನೋಂದಣಿ ಕುರಿತು ರೈತರಿಗೆ ಸೂಕ್ತ ಮಾಹಿತಿ ನೀಡದೆ ಗೊಂದಲ ಉಂಟುಮಾಡಿದರು. ಕಾದು ಕುಳಿತಿದ್ದರು. ಇದರಿಂದ ಅಸಮಾಧಾನಗೊಂಡ ರೈತರು ನೋಂದಣಿ ಆರಂಭಿಸಬೇಕೆಂದು ಒತ್ತಾಯಿಸಿ ರಸ್ತೆ ತಡೆ ನಡೆಸಿದರು.

ADVERTISEMENT

ಮಾಹಿತಿ ನೀಡಬೇಕಿರುವ ಯಾರೊಬ್ಬ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ಬಂದಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.