ADVERTISEMENT

ರೈತರ ಧರಣಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 7:06 IST
Last Updated 18 ಅಕ್ಟೋಬರ್ 2020, 7:06 IST
ದೇವನಹಳ್ಳಿಯ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು
ದೇವನಹಳ್ಳಿಯ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು   

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಯೋಜನೆಯಡಿ ಶೀಘ್ರವೇ ಮುಸುಕಿನಜೋಳ, ರಾಗಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಅ. 20ರಂದು ತಾಲ್ಲೂಕು ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸತೀಶ್ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಜೋಳ ಹಾಗೂ ರಾಗಿ ಖರೀದಿಸಲು ವರ್ತಕರು ರೈತರ ಬಳಿ ಬೇಕಾಬಿಟ್ಟಿ ಬೆಲೆಗೆ ಕೇಳುತ್ತಿದ್ದಾರೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವ ಮೊದಲು ಸರ್ಕಾರ ಖರೀದಿ ಕೇಂದ್ರ ತೆರೆದು ರೈತರ ನೆರವಿಗೆ ಧಾವಿಸಬೇಕಿದೆ ಎಂದರು.

ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ರವಿ ಶಿರವಾರ, ಮುತ್ತೇಗೌಡ, ಹರೀಶ್, ಮಹದೇವ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.