ADVERTISEMENT

ವಿಧಾನಸೌಧ ಚಲೋ ಲಾಠಿ ಹಿಡಿದ ಅನ್ನದಾತರು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 5:54 IST
Last Updated 10 ಡಿಸೆಂಬರ್ 2020, 5:54 IST
ಬೆಂಗಳೂರಿಗೆ ತೆರಳುವ ಮುನ್ನ ಲಾಠಿ ಹಿಡಿದ ರೈತರು
ಬೆಂಗಳೂರಿಗೆ ತೆರಳುವ ಮುನ್ನ ಲಾಠಿ ಹಿಡಿದ ರೈತರು   

ದೇವನಹಳ್ಳಿ: ವಿಧಾನಸೌಧ ಚಲೋಗೆ ಬುಧವಾರ ಲಾಠಿ ಹಿಡಿದು ರೈತರು ಬೆಂಗಳೂರಿನತ್ತ ನಡೆದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಕೆ. ಶಿವಪ್ಪ ಮಾತನಾಡಿ, ಕಳೆದ ಮೂರು ತಿಂಗಳಿಂದ ರೈತರು ವಿಭಿನ್ನ ರೀತಿಯಲ್ಲಿ ಚಳವಳಿ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಿರುವಾಗ ಬಿಜೆಪಿಯ ಕೆಲವು ಸಚಿವರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿರುವವರು ರೈತರಲ್ಲ ಬಾಡಿಗೆ ಗೂಂಡಾಗಳು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಸರ್ಕಾರಕ್ಕೆ ರೈತರ ಮೇಲಿರುವ ಕಾಳಜಿ ತೋರಿಸುತ್ತಿದೆ ಎಂದು ದೂರಿದರು.

ರೈತ ಸಂಘ ರಾಜ್ಯ ಘಟಕದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್, ಕರವೇ (ಚಲಪತಿ ಬಣ) ರಾಜ್ಯ ಘಟಕದ ಗೌರವಾಧ್ಯಕ್ಷ ಚಂದ್ರಶೇಖರ್, ಮುಖಂಡ ಅಣ್ಣಯ್ಯಪ್ಪ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.