ADVERTISEMENT

ರಾಗಿ ಖರೀದಿ ಕೇಂದ್ರಕ್ಕೆ ಮುಗಿಬಿದ್ದ ರೈತರು

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2022, 8:21 IST
Last Updated 25 ಏಪ್ರಿಲ್ 2022, 8:21 IST
   

ದೊಡ್ಡಬಳ್ಳಾಪುರ: ನಗರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಲು ರೈತರುನೂರಾರು ಸಂಖ್ಯೆಯಲ್ಲಿ ಸೇರಿದ್ದರಿಂದ ಬಾರಿ ನೂಕುನುಗ್ಗಲು ಉಂಟಾಗಿದೆ.

ಎರಡನೇ ಬಾರಿಗೆ ರಾಗಿ ಖರೀದಿಗೆ ನೋಂದಣಿ ಸೋಮವಾರದಿಂದ ಆರಂಭವಾಗಿದೆ.

ನೋಂದಣಿ ಮತ್ತೆ ಸ್ಥಗಿತವಾಗಬಹುದು ಎನ್ನುವ ಆತಂಕದಿಂದ ರೈತರು ಮುಗಿಬಿದ್ದಿದ್ದು ನೂಕುನುಗ್ಗಲು ನಿಯಂತ್ರಿಸಲು ಪೊಲೀಸರು ಸಾಹಸ ಪಡುತ್ತಿದ್ದಾರೆ.

ADVERTISEMENT

ರಾಗಿ ಖರೀದಿ ಕೇಂದ್ರಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ, ನೂಕು ನುಗ್ಗಲು ಉಂಟಾಗದಂತೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.