ADVERTISEMENT

ದೊಡ್ಡಬಳ್ಳಾಪುರ: ತಂದೆ–ಮಗನ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:15 IST
Last Updated 14 ಡಿಸೆಂಬರ್ 2025, 6:15 IST
<div class="paragraphs"><p>ಹಲ್ಲೆ</p></div>

ಹಲ್ಲೆ

   

– ಗೆಟ್ಟಿ ಚಿತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ.

ADVERTISEMENT

ಕಾಡನೂರಿನ ಮಧುಸೂದನ್ (49) ಕಾರ್ತಿಕ್ (25) ಹಲ್ಲೆಗೆ ಒಳಗಾದವರು.

ಕಾರ್ತಿಕ್ ಅವರನ್ನು ಗುರಿಯಾಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಮಗನ ರಕ್ಷಸಿಲು ಮುಂದಾದ ತಂದೆ ಮಧುಸೂದನ್ ಅವರ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹಲ್ಲೆಗೆ ನಿಖರವಾದ ಕಾರಣ ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಕಾರ್ತಿಕ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.