ADVERTISEMENT

ಸ್ವಸಹಾಯ ಸಂಘಕ್ಕೆ ಆರ್ಥಿಕ ನೆರವು

ಸಂಜೀವಿನಿ ಘಟಕ ಸ್ಥಾಪನೆಗೆ ಅನುದಾನ: ಶಾಸಕ ಟಿ. ವೆಂಕಟರಮಣಯ್ಯ

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 6:02 IST
Last Updated 10 ಜುಲೈ 2022, 6:02 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿಯಲ್ಲಿ ತಾಲ್ಲೂಕು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ವಿಶೇಷ ಕೇಂದ್ರೀಯ ನೆರವು ಯೋಜನೆಯಡಿ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಶಾಸಕ ಟಿ. ವೆಂಕಟರಮಣಯ್ಯ ಪ್ರೋತ್ಸಾಹ ಧನದ ಚೆಕ್ ವಿತರಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿಯಲ್ಲಿ ತಾಲ್ಲೂಕು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ವಿಶೇಷ ಕೇಂದ್ರೀಯ ನೆರವು ಯೋಜನೆಯಡಿ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಶಾಸಕ ಟಿ. ವೆಂಕಟರಮಣಯ್ಯ ಪ್ರೋತ್ಸಾಹ ಧನದ ಚೆಕ್ ವಿತರಿಸಿದರು   

ಕನಸವಾಡಿ (ದೊಡ್ಡಬಳ್ಳಾಪುರ ತಾಲ್ಲೂಕು):ಸ್ವಸಹಾಯ ಸಂಘಗಳ ಅಭಿವೃದ್ಧಿ ದೃಷ್ಟಿಯಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಂಜೀವಿನಿ ಘಟಕಗಳ ಸ್ಥಾಪನೆಗೆ ಅನುದಾನ ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಕೆಗೆ ಪ್ರೋತ್ಸಾಹ ನೀಡಲಾಗುವುದು ಶಾಸಕ ಟಿ. ವೆಂಕಟರಮಣಯ್ಯಹೇಳಿದರು.

ಕನಸವಾಡಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಶನಿವಾರ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ವಿಶೇಷ ಕೇಂದ್ರೀಯ ನೆರವು ಯೋಜನೆಯಡಿ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಸಹಾಯ ಸಂಘಗಳು ಗ್ರಾಮ ಮಟ್ಟದಲ್ಲಿ ಜನರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿವೆ. ಸಂಘದ ಪ್ರತಿಯೊಬ್ಬ ಸದಸ್ಯರು ಸಾಲದ ರೂಪದಲ್ಲಿ ಪಡೆದ ಹಣವನ್ನು ಸಮಯಕ್ಕೆ ಸರಿಯಾಗಿ ಪಾವತಿಸಿ ಸಂಘವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಜೊತೆಗೆ, ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಸುಸ್ತಿದಾರರಾಗದೆ ಸಾಲ ಮರುಪಾವತಿ ಮಾಡಿದ ನೋಂದಾಯಿತ ಸ್ತ್ರೀಶಕ್ತಿ ಸಂಘಗಳ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಪ್ರೋತ್ಸಾಹ ಧನದ ಚೆಕ್‌ವಿತರಿಸಲಾಯಿತು.

ಕನಸವಾಡಿ, ಹೊನ್ನಾವಾರ, ಚನ್ನಾದೇವಿ ಅಗ್ರಹಾರ, ಕಾಡನೂರು, ದೊಡ್ಡತುಮಕೂರು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ನೋಂದಾಯಿತ ಸಂಘಗಳ ಫಲಾನುಭವಿಗಳಿಗೆ ₹ 80 ಲಕ್ಷ ವಿತರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹೋಬಳಿ ಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಎಸ್. ಶ್ರೀನಾಥ್‌ಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿತಲಕ್ಷ್ಮಿ, ತಾಲ್ಲೂಕು ಅರೋಗ್ಯಾಧಿಕಾರಿ ಡಾ.ಪರಮೇಶ್ವರ, ಕಾಂಗ್ರೆಸ್‌ ಮುಖಂಡ ಜಿ. ಚುಂಚೇಗೌಡ, ಟಿ. ಮಂಜುನಾಥ್, ಟಿ. ವಿಜಯಕುಮಾರ್, ಆರ್.ವಿ. ಗೌಡ, ಕುಮಾರಬಾಬು, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್. ಪ್ರಭಾಕರ್, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿದೇವಿ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.