
ದೇವನಹಳ್ಳಿ: ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ. 9ರಿಂದ 13ರವರೆಗೆ ಜಿಲ್ಲೆಯ ಎಲ್ಲ ಬ್ಯಾಂಕ್‌ಗಳಲ್ಲಿ ಐದು ದಿನ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಪ್ತಾಹದ ಪೋಸ್ಟರನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಡುಗಡೆ ಮಾಡಿದರು.
ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಕ ಬ್ಯಾಂಕ್ ಮೂಲಕ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ. 268 ಬ್ಯಾಂಕ್ ಶಾಖೆಗಳಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೆವೈಸಿ ಎನ್ನುವುದು ಈ ಆರ್ಥಿಕ ಸಪ್ತಾಹದ ವಿಷಯವಾಗಿದೆ. ಕೆವೈಸಿ ಪ್ರಾಮುಖ್ಯತೆ ಹಾಗೂ ಅಧಿಕೃತವಾಗಿ ಮಾನ್ಯವಾದ ದಾಖಲೆಗಳ ಬಗೆಗಿನ ವಿಚಾರ, ರಿ-ಕೆವೈಸಿ, ವಿಡಿಯೋ ಕೆವೈಸಿ, ಸಿ-ಕೆವೈಸಿ, ಆಧಾರ್ ಒಟಿಪಿ ಆಧಾರಿತ ಇ- ಕೆವೈಸಿಗಳ ಬಗ್ಗೆ ಮಾಹಿತಿ ಕುರಿತಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳಲ್ಲಿ ಪ್ರತಿದಿನ ಒಂದೊಂದು ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರಿವು ಮೂಡಿಸಲಾಗುತ್ತದೆ.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಮಾಂಜಿ, ಜೈಶೇಖರ್, ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.