ADVERTISEMENT

ವಕೀಲರ ವಿರುದ್ಧ ಎಫ್‌ಐಆರ್‌: ಕಲಾಪ ಬಹಿಷ್ಕರಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2024, 4:36 IST
Last Updated 20 ಫೆಬ್ರುವರಿ 2024, 4:36 IST
ದೊಡ್ಡಬಳ್ಳಾಪುರದ ನ್ಯಾಯಾಲಯದ ಆವರಣದಲ್ಲಿ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ಎಫ್‌ಐಆರ್ ದಾಖಲು ಮಾಡಿರುವುದನ್ನು ಖಂಡಿಸಿ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು
ದೊಡ್ಡಬಳ್ಳಾಪುರದ ನ್ಯಾಯಾಲಯದ ಆವರಣದಲ್ಲಿ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ಎಫ್‌ಐಆರ್ ದಾಖಲು ಮಾಡಿರುವುದನ್ನು ಖಂಡಿಸಿ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು   

ದೊಡ್ಡಬಳ್ಳಾಪುರ: ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಸೋಮವಾರ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ ಟೀಕೆಗಳು ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು. ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದರು.

ವಕೀಲರ ಮೇಲೆ ಪ್ರಕರಣ ದಾಖಲಿಸಿದ ಅಧಿಕಾರಿಯನ್ನು ಈ ಕೂಡಲೇ ವಜಾ ಮಾಡಬೇಕು. ಸಾಮರಸ್ಯ ಕಾಪಾಡಬೇಕು, ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ, ಪೊಲೀಸರು 40 ವಕೀಲರ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪ ಬಹಿಷ್ಕರಿಸಿ ಮಾಡಿ ಪ್ರತಿಭಟನೆ ನಡೆಸಿವೆ ಎಂದು ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ತಿಳಿಸಿದರು.

ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರಾದ ಆರ್.ಪ್ರಭಾಕರ್. ಎನ್.ಲೀಲಾವತಿ ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.