ಆನೇಕಲ್: ಪಟ್ಟಣದ ಹೊಸೂರು ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಡಿಪೊ ಸಮೀಪದ ಹಳ್ಳಿ ಕೈ ರುಚಿ ಹೋಟೆಲ್ನಲ್ಲಿ ಅಗ್ನಿ ಆಕಸ್ಮಿಕ ಸಂಭವದಿಂದ ಹೋಟೆಲ್‌ನ ಮುಂಭಾಗದ ಬಾಗಿಲುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಹೊಸೂರು ರಸ್ತೆಯಲ್ಲಿರುವ ಕೈ ರುಚಿ ಹೋಟೆಲ್‌ಗೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ಅಗ್ನಿ ಅಕಸ್ಮಿಕ ಸಂಭವಿಸಿದ್ದು, ಕೂಡಲೇ ಸ್ಥಳೀಯರು ಅಗ್ನಿಯನ್ನು ನಂದಿಸುವ ಕಾರ್ಯ ಮಾಡಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ದಳದ 8ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸಿಲಿಂಡರ್ ಸ್ಪೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.