ಆನೇಕಲ್: ತಾಲ್ಲೂಕಿನ ತಮ್ಮನಾಯಕನಹಳ್ಳಿಯಲ್ಲಿ ಶುಕ್ರವಾರ ಗೋಮಾಳದ ಬಿದಿರು ಪೊದೆಯಲ್ಲಿ ಉರುಳಿಗೆ ಸಿಲುಕಿ ಐದು ವರ್ಷದ ಚಿರತೆಯೊಂದು ಮೃತಪಟ್ಟಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್, ಆರ್‌ಎಫ್‌ಓ ಶ್ರೀಧರ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತಮ್ಮನಾಯಕನಹಳ್ಳಿಗೆ ಭೇಟಿ ನೀಡಿ ಸ್ಥಳ ಪರೀಶೀಲನೆ ನಡೆಸಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಪಶುವೈದ್ಯಾಧಿಕಾರಿ ರುದ್ರೇಶ್ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಕಳೆದ ಕೆಲ ದಿನಗಳಿಂದ ತಮ್ಮನಾಯಕನಹಳ್ಳಿ ಸುತ್ತಮುತ್ತ ಚಿರತೆಯ ಓಡಾಟ ಪತ್ತೆಯಾಗಿತ್ತು. ಭೇಟೆಗಾಗಿ ಮತ್ತು ತೋಟಗಳ ರಕ್ಷಣೆಗಾಗಿ ಅಲ್ಲಲ್ಲಿ ಉರುಳು ಹಾಕಲಾಗುತ್ತು. ಚಿರತೆಯು ಉರುಳಿಗೆ ಸಿಲುಕಿ ಮೃತಪಟ್ಟಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.