ADVERTISEMENT

ಆಹಾರ ಸುರಕ್ಷತೆ: ಬೇಕರಿ, ಹೋಟೆಲ್‌ಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 7 ಮೇ 2020, 10:44 IST
Last Updated 7 ಮೇ 2020, 10:44 IST
ಡಾ.ಶಿವರಾಜ ಹೆಡೆ ಅವರು ಬೇಕರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಡಾ.ಶಿವರಾಜ ಹೆಡೆ ಅವರು ಬೇಕರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ದೊಡ್ಡಬಳ್ಳಾಪುರ:‘ಲಾಕ್‌ಡೌನ್‌ ಸಡಿಲಿಕೆ ನಂತರ ಬೇಕರಿ,ಹೋಟೆಲ್‌ ಸೇರಿದಂತೆ ಹಲವಾರು ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಶಿವರಾಜ ಹೆಡೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅವರು ಬಗ್ಗೆ ಮಾಹಿತಿ ನೀಡಿ, ‘50 ದಿನಗಳ ಕಾಲ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿ ಇದ್ದಾಗ ಎಲ್ಲಾ ಬೇಕರಿ ಸೇರಿದಂತೆ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳ ಬಾಗಿಲು ಮುಚ್ಚಲಾಗಿತ್ತು. ಈ ಸಂದರ್ಭದಲ್ಲಿ ಉಳಿದಿದ್ದ ಆಹಾರ ಪದಾರ್ಥಗಳು ಹಾಗೂ ಪ್ಯಾಕ್‌ ಮಾಡಲಾಗಿರುವ ತಿಂಡಿಗಳ ದಿನಾಂಕ, ಬಾಳಿಕೆಯ ಅವಧಿ ಇತರ ನಿಯಮಗಳ ಆಧಾರದ ಮೇಲೆ ಪರಿಶೀಲನೆ ನಡೆಸಲಾಗುತ್ತಿದೆ. ಬೇಕರಿಗಳಲ್ಲಿ ಮೈದಾ ಹಿಟ್ಟಿನಿಂದ ಈ ಹಿಂದೆ ತಯಾರಿಸಿರುವ ಯಾವುದೇ ತಿಂಡಿಗಳನ್ನು ಮಾರಾಟ ಮಾಡದಂತೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಇದರ ಪಾಲನೆ ಯಾವ ರೀತಿ ನಡೆಯುತ್ತಿದೆ ಎನ್ನುವುದರ ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು.

‘ಜನರು ಕೊರೊನಾ ವೈರಸ್‌ ಸೋಂಕಿನ ಆತಂಕದಲ್ಲಿದ್ದಾರೆ. ಹೀಗಾಗಿ ಪ್ರತಿಯೊಂದು ಬೇಕರಿ, ಕುರುಕಲು ತಿಂಡಿಗಳ ತಯಾರಿಕೆ ಘಟಕಗಳು, ಮಾರಾಟದ ಅಂಗಡಿಗಳಿಗೂ ಭೇಟಿ ನೀಡಿ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.