ADVERTISEMENT

ದೇವನಹಳ್ಳಿ: ಸರ್ಕಾರ ನಿರ್ಲಕ್ಷ್ಯದಿಂದ ತೊಂದರೆಯಲ್ಲಿ ಅಸಂಘಟಿತ ಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 7 ಮೇ 2020, 10:39 IST
Last Updated 7 ಮೇ 2020, 10:39 IST
ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು
ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು   

ದೇವನಹಳ್ಳಿ: ಕಳೆದ 45 ದಿನಗಳಿಂದ ಕೊರೊನಾ ಸೋಂಕು ಭೀತಿಯಿಂದ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ನಿಂದ ಹಲವರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಇವರ ಕಷ್ಟಗಳನ್ನು ಆಲಿಸಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿಲ್ಲ ಎಂದು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎನ್.ಸೊಣ್ಣಪ್ಪ ಆರೋಪಿಸಿದ್ದಾರೆ.

ಇಲ್ಲಿನ ಬೆಟ್ಟೆನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಆಹಾರದ ಕಿಟ್‌ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಇಲಾಖೆ ಅಧಿಕಾರಿಗಳು, ಕೆಲ ದಾನಿಗಳು ವಲಸಿಗ ಕಾರ್ಮಿಕರಿಗೆ ಸ್ಪಂದಿಸಿದ್ದಾರೆ. ಆದರೆ,ಸ್ಥಳೀಯ ಅಸಂಘಟಿತ ಕಾರ್ಮಿಕರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ತಾತ್ಕಾಲಿಕ ಪರಿಹಾರದ ವ್ಯವಸ್ಥೆಯನ್ನಾದರೂ ಮಾಡಬೇಕಿತ್ತು ಎಂದು ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ವಿಧಾನ ಸಭಾಕ್ಷೇತ್ರದಲ್ಲಿ 35 ಸಾವಿರ ದಿನಸಿ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಜೆಡಿಎಸ್ ಘಟಕ ಅಧ್ಯಕ್ಷ ಬಿ.ಮುನೇಗೌಡ, ಬಮೂಲ್ ನಿರ್ದೇಶಕ ಬಿ.ಶ್ರೀನಿವಾಸ್ ಮಾತನಾಡಿದರು.

ಜೆಡಿಎಸ್ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮಹೇಶ್, ಗೋಪಾಲಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಕುಂದಾಣ ಹೋಬಳಿ ಜೆಡಿಎಸ್ ಘಟಕ ಅಧ್ಯಕ್ಷ ಚಂದ್ರೇಗೌಡ, ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.