ADVERTISEMENT

ದಿನಗೂಲಿ ಕಾರ್ಮಿಕರಿಗೆ ಕಿಟ್‌: ಕೆ.ಎಸ್‌. ನಟರಾಜ್‌

ನೂರಾರು ಮಂದಿ ವಲಸಿಗರ ಬದುಕಿಗೆ ಸಂಕಷ್ಟ ತಂದೊಡ್ಡಿದ ಕೊರೊನಾ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 3:34 IST
Last Updated 24 ಜೂನ್ 2021, 3:34 IST
ಆನೇಕಲ್ ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ದಿನಗೂಲಿ ಕಾರ್ಮಿಕರಿಗೆ ಹಾರಗದ್ದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ನಟರಾಜ್ ಆಹಾರದ ಕಿಟ್‌ ವಿತರಿಸಿದರು
ಆನೇಕಲ್ ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ದಿನಗೂಲಿ ಕಾರ್ಮಿಕರಿಗೆ ಹಾರಗದ್ದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್. ನಟರಾಜ್ ಆಹಾರದ ಕಿಟ್‌ ವಿತರಿಸಿದರು   

ಆನೇಕಲ್: ‘ಸಂಕಷ್ಟದ ಸಮಯದಲ್ಲಿ ಉದ್ಯೋಗಗಳಿಲ್ಲದೇ ನೂರಾರು ಮಂದಿ ವಲಸೆ ಕಾರ್ಮಿಕರು ಹಲವಾರು ಸಮಸ್ಯೆ ಎದುರಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡಲು ಹಲವಾರು ಸಂಘ, ಸಂಸ್ಥೆಗಳು, ದಾನಿಗಳು ಮುಂದೆ ಬಂದಿರುವುದು ಶ್ಲಾಘನೀಯ’ ಎಂದು ಹಾರಗದ್ದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್‌. ನಟರಾಜ್‌ ತಿಳಿಸಿದರು.

ತಾಲ್ಲೂಕಿನ ವಡ್ಡರಪಾಳ್ಯದಲ್ಲಿ ದಿನಗೂಲಿ ಕಾರ್ಮಿಕರಿಗೆ ಆಹಾರದ ಕಿಟ್‌ ವಿತರಿಸಿ ಅವರು ಮಾತನಾಡಿದರು.

ಜಿಗಣಿ ಕೈಗಾರಿಕಾ ಪ್ರದೇಶವಾಗಿದ್ದು ಸಾವಿರಾರು ಮಂದಿಗೆ ಉದ್ಯೋಗ ನೀಡಿದೆ. ಆದರೆ, ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡು ಒಪ್ಪೊತ್ತಿನ ಊಟಕ್ಕೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವ ಮೂಲಕ ಮಾನವೀಯತೆಯನ್ನು ತೋರಬೇಕಾಗಿದೆ ಎಂದರು.

ADVERTISEMENT

ಕಂಠೀರವ ನೃತ್ಯ ಸಂಗೀತ ಸಭಾದ ಅಧ್ಯಕ್ಷ ಪಿ. ಧನಂಜಯ ಮಾತನಾಡಿ, ವಡ್ಡರಪಾಳ್ಯದಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿರುವುದರಿಂದ ಸಂಸ್ಥೆಯು ಅವರಿಗೆ ಆಹಾರದ ಕಿಟ್‌ ವಿತರಿಸುವ ಮೂಲಕ ನೆರವಾಗಬೇಕು ಎಂಬ ಉದ್ದೇಶದಿಂದ ಕಿಟ್‌ಗಳನ್ನು ನೀಡಲಾಗಿದೆ. ಇದಕ್ಕೆ ಅತ್ತಿಬೆಲೆ ಸರ್ಕಲ್‌ ಇನ್‌ಸ್ಪೆಕ್ಟರ್ ಕೆ. ವಿಶ್ವನಾಥ್‌ ಅವರು ಸಹಕಾರ ನೀಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎನ್‌.ಆರ್. ರವಿಚಂದ್ರ, ಸಂಪಂಗಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.