ADVERTISEMENT

ಹೃದಯಘಾತದಿಂದ ತಾವರೆಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಯಾನಂದ ಬಾಬು ನಿಧನ

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:38 IST
Last Updated 8 ಮೇ 2025, 15:38 IST
<div class="paragraphs"><p>ದಯಾನಂದ ಬಾಬು</p></div>

ದಯಾನಂದ ಬಾಬು

   

ಹೊಸಕೋಟೆ: ತಾಲ್ಲೂಕಿನ ನಂದಗುಡಿ ಹೋಬಳಿ ತಾವರೆಕೆರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಯಾನಂದ್‌ಬಾಬು(56) ಗುರುವಾರ ಹೃದಯಘಾತದಿಂದ ನಿಧನರಾಧರು.

ಮೃತರು ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮೇ 9ರಂದು ಮಧ್ಯಾಹ್ನ 12 ಗಂಟೆಗೆ ತಾವರೆಕೆರೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ADVERTISEMENT

ಶಾಸಕ ಶರತ್ ಬಚ್ಚೇಗೌಡ, ಕೆಪಿಸಿಸಿ ಕಾರ್ಯದರ್ಶಿ ಬಿ.ಗೋಪಾಲ್, ತಾ.ಪಂ ಮಾಜಿ ಅಧ್ಯಕ್ಷರಾದ ಬಿ.ವಿ.ರಾಜಶೇಖರ್‌ಗೌಡ, ಟಿ.ಎಸ್.ರಾಜಶೇಖರ್ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.