ADVERTISEMENT

ರೇಷ್ಮೆ ಬೆಳೆಗಾರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2018, 4:53 IST
Last Updated 17 ಜುಲೈ 2018, 4:53 IST
   

ರಾಮನಗರ: ರೇಷ್ಮೆಗೂಡು ಧಾರಣೆ ಕುಸಿತದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಟಮಾನದೊಡ್ಡಿ ಗ್ರಾಮದ ರೈತ ಕೆಂಪಯ್ಯ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ರೇಷ್ಮೆ ಗೂಡಿಗೆ ಬೆಂಬಲ ಬೆಲೆ ಘೋಷಣೆ ಸಂಬಂಧ ಸಭೆ ನಡೆಸಿದ್ದರು. ಗೂಡಿಗೆ ಉತ್ತಮ ಬೆಲೆ‌ ಸಿಗುತ್ತದೆ ಎಂದು ಕೆಂಪಯ್ಯ ಪತ್ನಿ ಧನಲಕ್ಷ್ಮಿ ಬಳಿ ಹೇಳಿಕೊಂಡಿದ್ದರು. ಆದರೆ ಮುಖ್ಯಮಂತ್ರಿಗಳು ಯಾವುದೇ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಮನನೊಂದು ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ.

ಅವರು ವಿವಿಧ ಬ್ಯಾಂಕುಗಳಲ್ಲಿ ಹಾಗೂ ಖಾಸಗಿಯಾಗಿ 5 ಲಕ್ಷ ಸಾಲ ಪಡೆದಿದ್ದರು ಎಂದು ಕುಟುಂಬದವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.