ADVERTISEMENT

ಕೋವಿಡ್: ನಾಲ್ವರು ನಿಧನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 4:46 IST
Last Updated 16 ಸೆಪ್ಟೆಂಬರ್ 2020, 4:46 IST

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಮಂಗಳವಾರ 50 ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ನಾಲ್ಕು ಜನ ಮೃತಪಟ್ಟಿದ್ದಾರೆ ಎಂದು ತಹಶೀಲ್ದಾರ್‌ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ಗಾಣಿಗರಪೇಟೆಯ 60 ವರ್ಷದ ಪುರುಷ, 71 ವರ್ಷದ ಮಹಿಳೆ, ರಾಜಘಟ್ಟ ಗ್ರಾಮದ 54 ವರ್ಷದ ಮಹಿಳೆ ಹಾಗೂ ಕರೇನಹಳ್ಳಿಯ 54 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಪ್ರಸ್ತುತ ತಾಲ್ಲೂಕಿನಲ್ಲಿ 1,718 ಜನರಲ್ಲಿ ಕೋವಿಂಡ್‌-19 ದೃಢಪಟ್ಟಿತ್ತು. ಈ ಪೈಕಿ 1,110 ಜನ ಗುಣಮುಖರಾಗಿದ್ದಾರೆ. 62 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.