ADVERTISEMENT

ಸೂಲಿಬೆಲೆ: ಕಂಪ್ಯೂಟರ್ ಉಚಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2020, 13:58 IST
Last Updated 11 ಜನವರಿ 2020, 13:58 IST

ಸೂಲಿಬೆಲೆ: ಪಟ್ಟಣದಲ್ಲಿರುವ ಅದ್ವೈತ ಫೌಂಡೇಷನ್ ಸಂಸ್ಥೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಡೊಮೆಸ್ಟಿಕ್ ಡಾಟಾ ಎಂಟ್ರಿ, ಅಕೌಂಟ್ಸ್ ಎಕ್ಸಿಕ್ಯೂಟಿವ್, ಅಕೌಂಟ್ ಪೇಯಬಲ್ ಅಂಡ್ ರಿಸಿವಬಲ್ ಕೋರ್ಸ್ ಗಳ ಉಚಿತ ತರಬೇತಿ ನೀಡಲಾಗುವುದು.

ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಫೌಂಡೇಷನ್ ಕಾರ್ಯದರ್ಶಿ ಮಹಾಂತ್ ತಿಳಿಸಿದ್ದಾರೆ. ಈಗಾಗಲೇ ಆನ್‌ಲೈನ್ ಮೂಲಕ ನೋಂದಣಿಯಾಗಿ ಸ್ಯಾಪ್ ನಂಬರ್ ಪಡೆದುಕೊಂಡಿರುವವರು ಹಾಗೂ ನೋಂದಾಯಿಸದೇ ಇರುವವರು 4 ದಿನದೊಳಗೆ ಸಂಸ್ಥೆಯ ಕಚೇರಿಗೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು, 10 ನೇ ತರಗತಿ ಕನಿಷ್ಠ ವಿದ್ಯಾರ್ಹತೆ ಇರುವ 18 ರಿಂದ 35 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ತರಬೇತಿ ಪಡೆದ ನಂತರ ಉದ್ಯೋಗವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ವಿವರಗಳಿಗಾಗಿ ಅದ್ವೈತ ಫೌಂಡೇಷನ್, ವಿ.ಪ್ರಸಾದ್ ಕಾಂಪ್ಲೆಕ್ಸ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮೊಬೈಲ್ : 99727 37610, 99640 96900 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.