ADVERTISEMENT

ಜನರಿಗೆ ಉಚಿತ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 4:07 IST
Last Updated 17 ಸೆಪ್ಟೆಂಬರ್ 2021, 4:07 IST

ದೇವನಹಳ್ಳಿ:ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ದೊಡ್ಡಬಳ್ಳಾಪುರದ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದಿಂದ ನಡೆಯುತ್ತಿರುವ ಯಾವುದೇ ಸೇವೆ ಹಾಗೂ ಯೋಜನೆಗಳಿಗೆ ಹಣ ನಿಗದಿಪಡಿಸಿರುವುದಿಲ್ಲ. ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿವೆ ಎಂದು ಇಲಾಖೆ ತಿಳಿಸಿದೆ.

ಇಲಾಖೆಯ ಹೆಸರು ಹೇಳಿಕೊಂಡು ಯಾವುದೇ ವ್ಯಕ್ತಿ ಇಲಾಖಾ ಯೋಜನೆ ಅಥವಾ ಇತರೆ ವಿಷಯಗಳಿಗೆ ಹಣದ ಬೇಡಿಕೆ ಇಟ್ಟರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು. ಹೆಚ್ಚಿನ ಮಾಹಿತಿಗೆ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಂಗವಿಕಲರ ಸಹಾಯವಾಣಿ 080–29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT