ದೊಡ್ಡಬಳ್ಳಾಪುರ: ಸೋಮವಾರ ಮೃತಪಟ್ಟಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ.ನಾರಾಯಣಪ್ಪ(95) ಅಂತ್ಯಕ್ರಿಯೆ ಬುಧವಾರ ತಾಲ್ಲೂಕಿನ ಸಾಸಲು ಹೋಬಳಿಯ ಕರಿಕಲ್ಲಹಳ್ಳಿಯ ಮೃತರ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಅವರು ಪುಷ್ಪಗುಚ್ಚ ಅರ್ಪಿಸುವ ಮೂಲಕ ಗೌರವ ಸಲ್ಲಿಸಿದರು.
ಅಂತ್ಯಕ್ರಿಯೆಗು ಮುನ್ನ ಕೆ.ಸಿ.ನಾರಾಯಣಪ್ಪ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನ 12 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಧೀರಜ್ ಮುನಿರಾಜು, ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ, ತಹಶೀಲ್ದಾರ್ ವಿದ್ಯಾವಿಭಾರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ರಾಜ್ಯ ರೈತ ಸಂಘದ ಮುಖಂಡರು,ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಗೌರವ ನಮನ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.