ADVERTISEMENT

ಪ್ರಸಿದ್ಧ ಯಾತ್ರಾ ಸ್ಥಳವಾಗಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಡಿಕೆಶಿ

ಸುಬ್ರಹ್ಮಣ್ಯಗೆ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದ ಡಿಕೆಶಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2025, 14:14 IST
Last Updated 13 ಏಪ್ರಿಲ್ 2025, 14:14 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭಾನುವಾರ ಬೆಳಿಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತಆಗಮಿಸಿ ಪೂಜೆ ಸಲ್ಲಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭಾನುವಾರ ಬೆಳಿಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಟುಂಬ ಸಮೇತಆಗಮಿಸಿ ಪೂಜೆ ಸಲ್ಲಿಸಿದರು   

ತೂಬಗೆರೆ (ದೊಡ್ಡಬಳ್ಳಾಪುರ): ಘಾಟಿ ಸುಬ್ರಹ್ಮಣ್ಯ ಕ್ಷೇತ್ರವನ್ನು ಪ್ರಸಿದ್ಧ ಯಾತ್ರಾ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭಾನುವಾರ ಕುಟುಂಬ ಸಮೇತರಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಇತಿಹಾಸ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಕ್ಷೇತ್ರವನ್ನು ಪ್ರಾಧಿಕಾರವನ್ನಾಗಿ ಘೋಷಣೆ ಮಾಡಲಾಗಿದೆ. ಈಗಾಗಲೇ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ದೊಡ್ಡಬಳ್ಳಾಪುರ ಬೆಂಗಳೂರು ರಾಜ್ಯ ಹೆದ್ದಾರಿಯ ಕಡತನಮಲೆ ಟೋಲ್‌ ಬಳಿ ಡಿಕೆಶಿ ಅವರು ಬರುತ್ತಿದ್ದಂತೆ ಹೆಸರಘಟ್ಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಎಂ.ಅದ್ದೆ ಹಾಗೂ ಕಾರ್ಯಕರ್ತರು ಸ್ವಾಗತ ಕೋರಿದರು.

‘ಮುಂದಿನ ಸಿಎಂ ಶಿವಕುಮಾರ್‌ಗೆ ಜೈ’ ಎಂಬ ಘೋಷಣೆ ಕೂಗಿ ಸಂಭ್ರಮಿಸಿದರು. ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಬರುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ, ಶಾಸಕ ಧೀರಜ್‌ ಮುನಿರಾಜು ಹಾಗೂ ತಾಲ್ಲೂಕಿನ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು. ಅರ್ಧ ಗಂಟೆಗೂ ಹೆಚ್ಚು ಸಮಯ ಕುಟುಂಬದವರೊಂದಿಗೆ ಸುಬ್ರಹ್ಮಣ್ಯಸ್ವಾಮಿ ಸನ್ನಿಧಿಯಲ್ಲಿ ಕುಳಿತು ಪೂಜೆ ಸಲ್ಲಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ಎನ್‌.ದುರ್ಗಶ್ರೀ,ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾ. ಪಂ.ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಮುನಿರಾಜು, ಶ್ರೀಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ನಾರಾಯಣಸ್ವಾಮಿ, ಸದಸ್ಯರಾದ ಎನ್‌.ರಂಗಪ್ಪ, ಮಹೇಶ್‌, ಹೇಮಲತಾರಮಶ್‌, ಲಕ್ಷ್ಮನಾಯಕ್‌, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಎಸ್‌ಟಿಆರ್‌ಆರ್‌ ಸದಸ್ಯ ದೀಪು, ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ, ಎಸ್‌. ಆರ್‌.ಮುನಿರಾಜು, ತೂಬಗೆರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರವಿಸಿದ್ದಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.