ADVERTISEMENT

ಕಲಾವಿದರಿಗೆ ಗೌರವ ನೀಡಿ: ಗೋವಿಂದರಾಜು

ರಂಗಭೂಮಿ ಕಲಾವಿದರ ಸಂಘದ ರಂಗಕಲಾ ಜ್ಯೋತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 4:44 IST
Last Updated 15 ಸೆಪ್ಟೆಂಬರ್ 2022, 4:44 IST
ದೊಡ್ಡಬಳ್ಳಾಪುರದ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಹನುಮಯ್ಯ ಅವರಿಗೆ ರಂಗಕಲಾ ಜ್ಯೋತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು
ದೊಡ್ಡಬಳ್ಳಾಪುರದ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಹನುಮಯ್ಯ ಅವರಿಗೆ ರಂಗಕಲಾ ಜ್ಯೋತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು   

ದೊಡ್ಡಬಳ್ಳಾಪುರ: ಪೌರಾಣಿಕ ನಾಟಕ ಕಲೆ ಮತ್ತು ಕಲಾವಿದರನ್ನು ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪಿ. ಗೋವಿಂದರಾಜು ಹೇಳಿದರು.

ನಗರದ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಂಗಭೂಮಿ ಕಲಾವಿದರ ಸಂಘದಿಂದ ನಡೆದ 7ನೇ ಮಾಸದ ರಂಗಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೊದಲಿನಿಂದಲೂ ಉತ್ತಮ ಕಲಾವಿದರನ್ನು ಸಮಾಜ ಗೌರವಿಸುತ್ತಾ ಬಂದಿದೆ. ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪೌರಾಣಿಕ ನಾಟಕಗಳು ಸಹಕಾರಿಯಾಗಿವೆ ಎಂದರು.

ADVERTISEMENT

ಗ್ರಾಮೀಣ ಪ್ರದೇಶದಲ್ಲಿ ಪೌರಾಣಿಕ ನಾಟಕಗಳು ಜನಪ್ರಿಯತೆಯನ್ನು ಉಳಿಸಿಕೊಂಡಿವೆ. ಪೌರಾಣಿಕ ನಾಟಕಗಳು ಮನರಂಜನೆಯಷ್ಟೇ ಸೀಮಿತವಾಗಿಲ್ಲ. ಬದುಕಿನ ಮೌಲ್ಯಗಳನ್ನು ಸದಾ ಎಚ್ಚರಿಸುವ ಕೆಲಸ ಮಾಡುತ್ತಾ ಬರುತ್ತಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಹನುಮಯ್ಯ ಮತ್ತು ಪುಷ್ಪಮೋಹನ್ ಅವರಿಗೆ ರಂಗಕಲಾ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಗೌರವಾಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ, ರಂಗ ಕಲಾವಿದರ ಸಂಘದ ಪದಾಧಿಕಾರಿಗಳು ಮತ್ತು ಕಲಾವಿದರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.