ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿದೇಶಿ ಮೂಲದ 3 ಚಿನ್ನದ ಸರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ.
ವಾಯು ಗುಪ್ತಚರ ದಳದ ಸಿಬ್ಬಂದಿಯು ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಯನ್ನು ತೀವ್ರ ತಪಾಸಣೆ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತನಿಂದ ₹ 46.74 ಲಕ್ಷ ಮೌಲ್ಯದ 898 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.