ADVERTISEMENT

ಗುದದ್ವಾರದಲ್ಲಿ ಚಿನ್ನ ಕಳ್ಳಸಾಗಣೆ; ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 2:07 IST
Last Updated 21 ಫೆಬ್ರುವರಿ 2023, 2:07 IST
ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ
ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ   

ದೇವನಹಳ್ಳಿ: ಗುದದ್ವಾರದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ಆರೋಪಿಯಿಂದ ಅಂದಾಜು ₹ 17.76 ಲಕ್ಷ ಮೌಲ್ಯದ 314.47 ಗ್ರಾಂ. ಚಿನ್ನವನ್ನು ವಶಕ್ಕೆ ಪಡೆದಿರುವ ಬೆಂಗಳೂರು ಕಸ್ಟಮ್ಸ್‌ ಅಧಿಕಾರಿಗಳು, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.‌

ಬ್ಯಾಂಕಾಂಕ್‌ನಿಂದ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಕ್ಯಾಪ್ಸುಲ್‌ ಮಾದರಿಯಲ್ಲಿ ಪೇಸ್ಟ್‌ ರೂಪದ ಚಿನ್ನ ಗುದದ್ವಾರದಲ್ಲಿ ಪತ್ತೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.