ADVERTISEMENT

‘ಶಿಕ್ಷಕರ ನೆರವಿಗೆ ಬಾರದ ಸರ್ಕಾರ’

​ಪ್ರಜಾವಾಣಿ ವಾರ್ತೆ
Published 20 ಮೇ 2021, 3:49 IST
Last Updated 20 ಮೇ 2021, 3:49 IST

ದೇವನಹಳ್ಳಿ/ವಿಜಯಪುರ: ‘ರಾಜ್ಯ ಸರ್ಕಾರ ಲಾಕ್‌ಡೌನ್ ಜಾರಿಗೊಳಿಸಿದ ನಂತರ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದೆ ಕೈ ಬಿಟ್ಟಿರುವುದು ಸರಿಯಲ್ಲ’ ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರು, ಉಪನ್ಯಾಸಕರು ಜೀವನ ನಡೆಸಲು ಪರದಾಡುತ್ತಿದ್ದಾರೆ. ಮನೆ ಬಾಡಿಗೆ ಕಟ್ಟಿಲ್ಲ. ಕುಟುಂಬದ ಪೋಷಣೆಗಾಗಿ ತರಕಾರಿ ವ್ಯಾಪಾರ, ದಿನಗೂಲಿ ಕೆಲಸ ಮಾಡಿ ಜೀವನ ಮಾಡುತ್ತಿರುವವರು ಇದ್ದಾರೆ. ಇಂತಹ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಖಾಸಗಿ ಶಾಲಾ, ಕಾಲೇಜುಗಳ ಸಿಬ್ಬಂದಿಯ ನೆರವಿಗೆ ಬರುವ ಬದಲಿಗೆ ಅವರನ್ನು ವಿಶೇಷ ಪ್ಯಾಕೇಜ್‌ನಿಂದ ಹೊರಗಿಟ್ಟಿರುವುದು ಖಂಡನೀಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT