ADVERTISEMENT

ನೀರಿನ ಟ್ಯಾಂಕರ್‌ಗಳಿಗೆ ಜಿ.ಪಿ.ಎಸ್ ಕಡ್ಡಾಯ: ಡಿಸಿ

​ಪ್ರಜಾವಾಣಿ ವಾರ್ತೆ
Published 9 ಮೇ 2019, 12:05 IST
Last Updated 9 ಮೇ 2019, 12:05 IST
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕರೀಗೌಡ 
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕರೀಗೌಡ    

ದೇವನಹಳ್ಳಿ: ಕುಡಿಯುವ ನೀರು ಪೂರೈಕೆ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಸೌಲಭ್ಯ ಅಳವಡಿಸಲು ಜಲ ಸಂಪನ್ಮೂಲ ಇಲಾಖಾ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಕುರಿತಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ ನೀರಿನ ಸಮಸ್ಯೆ ಕಂಡುಬರದಂತೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜಿಪಿಎಸ್‌ ಅಳವಡಿಸದಿದ್ದರೆ ನೀರು ಪೂರೈಕೆ ಸಂಬಂಧಿಸಿದ ಬಿಲ್‌ಗಳಿಗೆ ಸಹಿ ಹಾಕುವುದಿಲ್ಲ’ ಎಂದರು.

ADVERTISEMENT

‘ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ವಸತಿ ಯೋಜನೆಯ ಪ್ರಗತಿ ಶೇ 100ರಷ್ಟು ಸಾಧಿಸಲು ಸಂಬಂಧಪಟ್ಟ ಎಲ್ಲಾ ಅನುಷ್ಠಾನ ಅಧಿಕಾರಿಗಳು ಮುಂದಾಗಬೇಕು. ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ಶೀಫ್ರ ಪೂರ್ಣಗೊಳಿಸಬೇಕು. ಪ್ರಸಕ್ತ 20 ಟನ್ ಮೇವಿನ ಅವಶ್ಯಕತೆ ಇದೆ. ಜಾನುವಾರುಗಳ ಮೇವಿನ ಕೊರತೆ ನೀಗಿಸಲು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಮೇವು ಖರೀದಿಗೆ ಮುಂದಾಗಬೇಕು’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಉಪ ಕಾರ್ಯದರ್ಶಿ ಕರಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.