ವಿಜಯಪುರದಲ್ಲಿ ಪ್ರಗತಿ ಪ್ರಥಮ ದರ್ಜೆ ಕಾಲೇಜಿನ 2024-25 ನೇ ಸಾಲಿನ ಬಿ.ಕಾಂ, ಬಿಎಸ್ ಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು
ವಿಜಯಪುರ (ದೇವನಹಳ್ಳಿ): ಪ್ರಗತಿ ಪ್ರಥಮ ದರ್ಜೆ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು.
ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಉದ್ಯಮಿ ಎ.ನಾರಾಯಣ ಪ್ರಸಾದ್, ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸುವ ಗುರಿ ಹೊಂದಿದ್ದಾರೆ ಮಾತ್ರ ಭವಿಷ್ಯ ಉತ್ತಮವಾಗಿರಲಿದೆ ಎಂದರು.
ಪ್ರಗತಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ.ಸತೀಶ್ ಕುಮಾರ್, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಹೆಚ್ಚು ಶ್ರಮ ವಹಿಸುತ್ತಾರೆ. ವಿದ್ಯಾರ್ಥಿಗಳು ಅದನ್ನು ಅರಿತು ಪೋಷಕರಿಗೆ ಕೀರ್ತಿ ತರುವ ರೀತಿಯಲ್ಲಿ ಸಾಧನೆ ಮಾಡಬೇಕು ಎಂದರು.
ಪ್ರಗತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎನ್.ನಾಗರಾಜ್, ಕೇವಲ ಹೆಣ್ಣು ಮಕ್ಕಳಿಗಾಗಿ ಉನ್ನತ ಶಿಕ್ಷಣ ನೀಡುವ ಸಲುವಾಗಿ ಆರಂಭವಾದ ಪ್ರಗತಿ ಶಿಕ್ಷಣ ಸಂಸ್ಥೆ ನಂತರ ಗಂಡು ಮಕ್ಕಳಿಗೂ ಶಿಕ್ಷಣ ನೀಡುವುದರೊಂದಿಗೆ, ಉದ್ಯೋಗ ಅರಸುವ ಮಕ್ಕಳಿಗಾಗಿ ಕೈಗಾರಿಕಾ ತರಬೇತಿ ಕೇಂದ್ರ ಪ್ರಾರಂಭಿಸಿದೆ ಎಂದು ತಿಳಿಸಿದರು.
2024-25ನೇ ಸಾಲಿನ ಪ್ರಗತಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್‌ಸಿ ವಿಭಾಗದಲ್ಲಿ ಉತ್ತಮ ಅಂಕ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಚಂದನ ಅವರು ತಮ್ಮ ತಂದೆಯವರಿಗೆ ಸನ್ಮಾನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.