ADVERTISEMENT

ಸೂಲಿಬೆಲೆ: ಗ್ರಾಮ ಪಂಚಾಯಿತಿ ಸದಸ್ಯೆಯ ಸದಸ್ಯತ್ವ ರದ್ದು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 5:39 IST
Last Updated 28 ನವೆಂಬರ್ 2021, 5:39 IST
ದೊಡ್ಡಬಳ್ಳಾಪುರ ತಾಲ್ಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ರಾಗಿ ತೆನೆ ಕೊಯ್ದು ಕೊಟ್ಟು ಮೇವು ಪಡೆಯುತ್ತಿರುವ ರೈತರು
ದೊಡ್ಡಬಳ್ಳಾಪುರ ತಾಲ್ಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ರಾಗಿ ತೆನೆ ಕೊಯ್ದು ಕೊಟ್ಟು ಮೇವು ಪಡೆಯುತ್ತಿರುವ ರೈತರು   

ಸೂಲಿಬೆಲೆ: ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮ ಪಂಚಾಯಿತಿ ಸದಸ್ಯೆ ಸರೋಜಾ ಅವರ ಸದಸ್ಯತ್ವ ರದ್ದುಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸರೋಜಾ ಸತತವಾಗಿ ಗ್ರಾಮ ಪಂಚಾಯಿತಿ ಸಭೆಗಳಿಗೆ ಗೈರುಹಾಜರಾಗಿದ್ದು, ವಿಚಾರಣೆಗೂ ಹಾಜರಾಗಿಲ್ಲ. ಇದರಿಂದ ಪಂಚಾಯಿತಿ ಕಾರ್ಯಗಳಿಗೆ ತೊಂದರೆಯಾಗಿದೆ. ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಡ್ಡಿಯಾಗಿದೆ. ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿನಿಯಮಗಳ ಅನ್ವಯ ಅವರ ಧೋರಣೆಯನ್ನು ಕರ್ತವ್ಯ ನಿರ್ಲಕ್ಷ್ಯ ಎಂದು ಪರಿಗಣಿಸಿ ಸದಸ್ಯ ಸ್ಥಾನದಿಂದ ಅವರನ್ನು ತೆಗೆದು ಹಾಕಲಾಗಿದೆ. ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮುತ್ಸಂದ್ರ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅವರು, 2017ರ ಸೆ. 29ರಂದು ಪ್ರಮಾಣ ಪತ್ರ ಸ್ವೀಕರಿಸಿದ್ದರು. ಮುಂದಿನ ವರ್ಷದವರೆಗೂ ಅವರ ಸದಸ್ಯತ್ವ ಇತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.