ADVERTISEMENT

ಹೆಗ್ಗಡಿಹಳ್ಳಿ ಗ್ರಾ.ಪಂ. ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 6:00 IST
Last Updated 8 ಜುಲೈ 2022, 6:00 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಎನ್. ಕವಿತಾ ಅವರನ್ನು ಸದಸ್ಯರು ಅಭಿನಂದಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಎನ್. ಕವಿತಾ ಅವರನ್ನು ಸದಸ್ಯರು ಅಭಿನಂದಿಸಿದರು   

ದೊಡ್ಡಬಳ್ಳಾಪುರ:ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಮುನಿರತ್ನಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಎನ್. ಕವಿತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಆರ್. ಸುನೀಲ್‌ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

14 ಸದಸ್ಯ ಬಲದ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 13 ಸದಸ್ಯರು ಹಾಜರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.