ADVERTISEMENT

ದೇವನಹಳ್ಳಿ: ಅಂಗವಿಕಲರಿಗೆ ದಿನಸಿ ಕಿಟ್‌

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 4:45 IST
Last Updated 3 ಜೂನ್ 2021, 4:45 IST
ದೇವನಹಳ್ಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಅಂಗವಿಕಲರಿಗೆ ಆಹಾರದ ಕಿಟ್ ವಿತರಿಸಿದರು
ದೇವನಹಳ್ಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಅಂಗವಿಕಲರಿಗೆ ಆಹಾರದ ಕಿಟ್ ವಿತರಿಸಿದರು   

ದೇವನಹಳ್ಳಿ: ‘ದೇಶದಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಾದಂತಹ ಸಂದರ್ಭದಲ್ಲಿ ಯಾವುದೇ ಸರ್ಕಾರಗಳು ಅಧಿಕಾರದಲ್ಲಿದ್ದರೂ ಜನರ ಪ್ರಾಣ ರಕ್ಷಣೆಯ ಹಿತದೃಷ್ಟಿಯಿಂದ ಸಹಕಾರ ನೀಡಬೇಕಾಗಿರುವುದು ಎಲ್ಲಾ ಪಕ್ಷಗಳ ಹೊಣೆಗಾರಿಕೆಯಾಗಬೇಕು’ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ದೇ.ಸೂ. ನಾಗರಾಜ್ ಹೇಳಿದರು.

ಪಟ್ಟಣದಲ್ಲಿ ಕೇಂದ್ರ ಸರ್ಕಾರ ಎರಡನೇ ಅವಧಿಯಲ್ಲಿ 2 ವರ್ಷವನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಅಭಿವೃದ್ಧಿ ಫೌಂಡೇಶನ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಅಂಗವಿಕಲರಿಗೆ ದಿನಸಿ ಕಿಟ್ ಹಾಗೂ ತರಕಾರಿ ವಿತರಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಡವರು, ಮಧ್ಯಮ ವರ್ಗದವರು, ರೈತರು, ಕೃಷಿ ಕೂಲಿಕಾರ್ಮಿಕರು, ಸೇರಿದಂತೆ ಎಲ್ಲಾ ಸ್ತರಗಳ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿದೆ. ಅವರನ್ನು ಆರ್ಥಿಕ ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

ADVERTISEMENT

ದೇಶದಲ್ಲಿ ಕೊರೊನಾ ಸೋಂಕಿನ ನಿವಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ ಎಂದರು.

ವಿಎಚ್‌ಪಿ ಮುಖಂಡ ಗಣೇಶ್ ಬಾಬು ಮಾತನಾಡಿ, ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ವಿಶ್ವದ ನಾಯಕರ ಕಣ್ಣು ಭಾರತದ ಕಡೆಗೆ ದಿಟ್ಟಿಸಿ ನೋಡುವಂತಾಗಿದೆ. ವಿಶ್ವಗುರುವಾಗುವತ್ತ ಸಾಗುತ್ತಿರುವ ಭಾರತದಲ್ಲಿ ಇಂದಿನ ಸಂಕಷ್ಟದ ಪರಿಸ್ಥಿತಿಯನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿ. ನಾಗೇಂದ್ರ, ಬಿಜೆಪಿ ತಾಲ್ಲೂಕು ಘಟಕದ ಉಪಾಧ್ಯಕ್ಷೆ ಪುನೀತಾ, ಹನುಮಂತಪ್ಪ, ಲೀಲಾವತಿ ಎಂ. ಯಾದವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.