
ದೇವನಹಳ್ಳಿ: ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಜನ್ಮದಿನದ ಪ್ರಯುಕ್ತ ಇಲ್ಲಿಯ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.
ಕುಮಾರಸ್ವಾಮಿ ಬಡವರ ಕಷ್ಟಕ್ಕೆ ಮಿಡಿಯುವ ಮಾತೃ ಹೃದಯಿ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣ, ಚನ್ನರಾಯಪಟ್ಟಣ ಹೋಬಳಿ ಅಧ್ಯಕ್ಷ ಮುನಿರಾಜ್, ಕುಂದಾಣ ಹೋಬಳಿ ಅಧ್ಯಕ್ಷ ಜಗದೀಶ್, ದೇವನಹಳ್ಳಿ ಟೌನ್ ಅಧ್ಯಕ್ಷ ಮುನಿನಂಜಪ್ಪ, ಯುವ ಘಟಕದ ಅಧ್ಯಕ್ಷ ಹೊಸಹಳ್ಳಿ ಟಿ. ರವಿ, ಎಸ್.ಟಿ. ಘಟಕದ ಅಧ್ಯಕ್ಷ ವೆಂಕಟೇಶ್ ಮೂರ್ತಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.