ದೇವನಹಳ್ಳಿ: ಇತ್ತೀಚಿಗೆ ಬೀಳುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.
ಮಳೆ, ಪ್ರವಾಹದಿಂದ ತೊಂದರೆಗೊಳಗಾಗುವ ಜಿಲ್ಲೆಯ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 80-29902025 ಸಂಪರ್ಕಿಸಿ ಅಹವಾಲು ಸಲ್ಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.