
ವಿಜಯಪುರ (ದೇವನಹಳ್ಳಿ): ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿಯಿಂದ ಜ.26 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ ಹಾಗೂ ಶೋಭಾಯಾತ್ರೆ ಅಂಗವಾಗಿ ಭಾನುವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ‍್ಯಾಲಿ ನಡೆಯಿತು.
ಪಟ್ಟಣದ ಶಿಡ್ಲಘಟ್ಟ ಕ್ರಾಸ್ ಬಳಿ ಇರುವ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ಭಾರತ ಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು.
ಬಿಜೆಪಿ ಟೌನ್ ಅಧ್ಯಕ್ಷ ವೆಂಕಟೇಶ್ ಪ್ರಭು, ಕಾರ್ಯದರ್ಶಿ ಶಾಮಣ್ಣ, ಮುಖಂಡರಾದ ಕನಕರಾಜು, ರಾಮು ಭಗವಾನ್, ರಾಮಕೃಷ್ಣ ಹೆಗಡೆ, ವರದರಾಜು, ಬಿ.ಕೆ. ದಿನೇಶ್, ಸಿ. ಸುರೇಶ್, ಪುನೀತ್ ಕುಮಾರ್, ರವಿಕುಮಾರ್, ವಿ.ವಿಶ್ವನಾಥ್, ವಿ.ಬಸವರಾಜು, ಗಿರೀಶ್, ಪ್ರಕಾಶ್, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಭಾರತಿ ಪ್ರಭುದೇವ್, ಆಯೋಜನಾ ಸಮಿತಿಯ ದೀಪಾ ರಮೇಶ್, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರು ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.