ಹೊಸಕೋಟೆ: ತಾಲ್ಲೂಕಿನ ಚಿಂತಾಮಣಿ- ಹೊಸಕೋಟೆ ಹೆದ್ದಾರಿಯ ಬನಹಳ್ಳಿ ಸಮೀಪ ಖಾಸಗಿ ಬಸ್‌ವೊಂದು ಪಲ್ಟಿಯಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಹೊರಟಿದ್ದ ಖಾಸಗಿ ಬಸ್ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಸ್ತೆ ಉಬ್ಬು ಗಮನಿಸದ ಚಾಲನೆ ಮಾಡಿದ ಕಾರಣ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಹೊಸಕೋಟೆ ನಗರದ
ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ನಂದಗುಡಿ ಪೊಲೀಸರು ಹಾಗೂ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.