ಅರ್ಜಿ ಆಹ್ವಾನ
ದೇವನಹಳ್ಳಿ: ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸಂಬಂಧಿಸಿದ ವಿಷಯಗಳಲ್ಲಿ (Allied subject) ಪದವಿ ಮಾಡಿರಬೇಕು. ಕೃಷಿ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಸ್ವ-ವಿವರ ಜತೆಗೆ ಬೇಕಾದ ಪೂರಕ ದಾಖಲೆಗಳನ್ನು ಮೇ15ರೊಳಗೆ ಕಚೇರಿ ಅವಧಿಯೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 208/209, ಕಚೇರಿ ದೂರವಾಣಿ ಸಂಖ್ಯೆ 080-26711594. ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕಿಸಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.