ಹೊಸಕೋಟೆ: ತಾಲ್ಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ತಾವರೆಕೇರೆ ಸಮೀಪ ಬುಧವಾರ ಮುಂಜಾನೆ 4 ಗಂಟೆ ಸುಮಾರಿನಲ್ಲಿ ಹೆದ್ದಾರಿ ದಾಟುತ್ತಿದ್ದ ಜಿಂಕೆಗೆ ವೇಗವಾಗಿ ಬರುತ್ತಿದ್ದ ವಾಹನ ಗುದ್ದಿ ಸ್ಥಳದಲ್ಲೇ ಮೃತಪಟ್ಟಿದೆ.
ಅಪಘಾತಕ್ಕಿಡಾಗಿ ಜಿಂಕೆ ಸತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಹೊಸಕೋಟೆ ಅರಣ್ಯವಲಯ ಅಧಿಕಾರಿಗಳಿಗೆ ಸುದ್ದಿ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಜಿಂಕೆಯನ್ನು ಕೊಂಡೊಯ್ದು ಶವ ಪರೀಕ್ಷೆ ನಡೆಸಿ, ಅಂತಿಮ ಸಂಸ್ಕಾರ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.