
ಹೊಸಕೋಟೆ: ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಈಚೆಗೆ ಚಾಲನೆ ನೀಡಿದರು.
ಗ್ರಾಮಗಳ ಅಭಿವೃದ್ದಿಯ ಜೊತೆಗೆ ಹಿಂದುಳಿದ ಎಲ್ಲಾ ಸಮುದಾಯಗಳಿಗೂ ಸರಿಯಾದ ಸ್ಥಾನಮಾನ ನೀಡಿದಾಗ ಮಾತ್ರ ಅವು ಸಮಾಜಮುಖಿ ಮುನ್ನೆಲೆಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಣ, ಸಮುದಾಯ ಭವನ, ವಿದ್ಯಾರ್ಥಿ ನಿಲಯಗಳ ಅಭಿವೃದ್ದಿಗೆ ಹೆಚ್ಚು ಕಾಳಜಿವಹಿಸಲಾಗುತ್ತಿದೆ ಎಂದು ಹೇಳಿದರು.
ತಾಲ್ಲೂಕಿನ ಕಸಬಾ ಮತ್ತು ನಂದಗುಡಿ ಹೋಬಳಿಯ ವ್ಯಾಪ್ತಿಯಲ್ಲಿ ₹4 ಕೋಟಿ ವೆಚ್ಚದ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮತ್ತು ಸಮಾಜ ಕಲ್ಯಾಣ ಇಲಾಖೆ ಅನುದಾನ ಹಾಗೂ ಗ್ರಾ.ಪಂ.ಗಳ ಪಂಚಾಯಿತಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದಡಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಲಾಯಿತು.
ಸೊಣ್ಣದೇನಹಳ್ಳಿಯಲ್ಲಿ ₹40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ, ದೊಡ್ಡಹುಲ್ಲೂರಿನಲ್ಲಿ ₹20 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಚಿಕ್ಕಹುಲ್ಲೂರಿನಲ್ಲಿ ₹30 ಲಕ್ಷದ ವೆಚ್ಚದ ವಿವಿಧ ಕಾಮಗಾರಿಗೆ ಹಾಗೂ ಪಿಲ್ಲಗುಂಪೆ ಚೊಕ್ಕಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮೇಥೆಡ್ಸ್ ಕಂಪನಿಯ ಸಿಎಸ್ಆರ್ ನಿಧಿಯಡಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.