
ಹೊಸಕೋಟೆ: ನಗರದ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಸಿ.ಜಯರಾಜ್ ಪ್ರಾಯೋಜಕತ್ವದಲ್ಲಿ ಬುಧವಾರ ರಾತ್ರಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಮಕರ ಸಂಕ್ರಾಂತಿ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ 12 ಶಾಲೆ 120 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹೊಸಕೋಟೆ ನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ₹1 ಲಕ್ಷ ನಗದು ಮತ್ತು ಟ್ರೋಫಿಯನ್ನು, ದ್ವಿತೀಯ ಸ್ಥಾನವಾಗಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ₹50 ಸಾವಿರ ನಗದು ಮತ್ತು ಟ್ರೋಫಿ, ಮೂರನೇ ಸ್ಥಾನವಾಗಿ ಓಂ ಶ್ರೀ ಶಾಲೆ ವಿದ್ಯಾರ್ಥಿಗಳು ₹25 ಸಾವಿರ ನಗದು ಟ್ರೋಫಿ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಸುಬ್ಬಣ್ಣ, ಕೃಷ್ಣಮೂರ್ತಿ, ಉದಯ್ ಕುಮಾರ್, ಹೂಡಿ ವಿಜಯ್ ಕುಮಾರ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.